ಸಬಾಹಲ್ ಖೈರ್
ಸಬಾಹಲ್ ಖೈರ್
ಅಲ್ಲಾಹನ ಮೇಲೆ ತವಕ್ಕುಲ್ ಮಾಡುವವರನ್ನು
(ದೂತರೇ,) ನೀವು ಅವರ (ವಿಶ್ವಾಸಿಗಳ) ಪಾಲಿಗೆ ಸೌಮ್ಯರಾಗಿರುವುದು ಅಲ್ಲಾಹನ ಕೃಪೆಯೇ ಆಗಿದೆ. ಒಂದು ವೇಳೆ ನೀವು ಒರಟು ಸ್ವಭಾವದವರೂ ಕಠೋರ ಹೃದಯದವರೂ ಆಗಿದ್ದರೆ, ಅವರೆಲ್ಲಾ ನಿಮ್ಮ ಬಳಿಯಿಂದ ಚದುರಿ ಹೋಗುತ್ತಿದ್ದರು. ನೀವು ಅವರನ್ನು ಕ್ಷಮಿಸಿರಿ. ಅವರ ಕ್ಷಮೆಗಾಗಿ (ಅಲ್ಲಾಹನಲ್ಲಿ) ಪ್ರಾರ್ಥಿಸಿರಿ ಮತ್ತು ವಿವಿಧ ವಿಷಯಗಳಲ್ಲಿ ಅವರ ಜೊತೆ ಸಮಾಲೋಚಿಸಿರಿ. ಇನ್ನು ನೀವು ಒಂದು ನಿರ್ಧಾರ ಕೈಗೊಂಡರೆ (ಆ ಕುರಿತು) ಅಲ್ಲಾಹನಲ್ಲಿ ಸಂಪೂರ್ಣ ಭರವಸೆ ಇಟ್ಟು ಬಿಡಿರಿ. (ತನ್ನಲ್ಲಿ) ಭರವಸೆ ಇಡುವವರನ್ನು ಅಲ್ಲಾಹನು ಖಂಡಿತ ಪ್ರೀತಿಸುತ್ತಾನೆ..
[ಕುರ್‍ಆನ್, 3: 159]
Comments
Post a Comment